ರಾಮನಗರ: ಜಿಲ್ಲಾ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಇಂದು ರಾಮನಗರದ ಪೊಲೀಸ್ ಇಲಾಖೆ ಸಭಾಂಗಣದಲ್ಲಿ ಪೋಲಿಸ್ ಇಲಾಖೆಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಸಹಾಯಕ ಮಕ್ಕಳ ಪೋಲಿಸ್ ಅಧಿಕಾರಿಗಳು, ಸಹಾಯಕ ಸಬ್‌ಇನ್ಸ್ಪೆಕ್ಟರ್, ಮಹಿಳಾ ಹೆಡ್ ಕಾನ್ಸ್ಟೇಬಲ್, ಮಕ್ಕಳ ಪೊಲೀಸ್ ಕಾನ್ಸ್ಟೇಬಲ್, ಮಹಿಳಾ ಪೋಲಿಸ್ ಸಬ್‌ಇನ್ಸ್ಪೆಕ್ಟರ್ ಹಾಗೂ ಸಹಾಯಕ ತನಿಖಾ ಅಧಿಕಾರಿಗಳಿಗೆ ಮಕ್ಕಳ ನ್ಯಾಯ ಕಾಯ್ದೆ-೨೦೧೫, ಪೋಕ್ಸೋ ಕಾಯ್ದೆ-೨೦೧೨ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆಯ ಕುರಿತಾಗಿ ಜಿಲ್ಲಾ ಮಟ್ಟದ ಒಂದು ದಿನದ ಸಾಮರ್ಥಾಭಿವೃದ್ಧಿ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
ಕಾರ್ಯಗಾರವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ಉದ್ಘಾಟಿಸಿದರು. ಯುನೆಸೆಫ್‌ನ ರಾಜ್ಯ ಸಂಚಾಲಕರಾದ ರಾಘವೇಂದ್ರ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಪೊಲೀಸ್ ಇಲಾಖಾ ಸಿಬ್ಬಂದಿಗಳಿಗೆ ಕಾಯ್ದೆಗಳ ಕುರಿತಾಗಿ ಕಾರ್ಯಗಾರವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುರೇಶ್, ಪೊಲೀಸ್ ಉಪಅಧೀಕ್ಷಕ ದಿನಕರಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ನಾಗವೇಣಿ. ವಿ., ಪೊಲೀಸ್ ಇಲಾಖಾ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.