Wednesday, May 21, 2025
Google search engine

Homeರಾಜಕೀಯಸಿದ್ದರಾಮಯ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ: ನಳಿನ್ ಕುಮಾರ್ ಕಟೀಲ್

ಸಿದ್ದರಾಮಯ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ: ನಳಿನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ. ಕಾಂಗ್ರೆಸ್ ನಾಯಕರು ತಮ್ಮ ತಮ್ಮಲ್ಲೇ ಹೊಡೆದಾಡಿಕೊಳ್ಳುತ್ತಿದ್ದಾರೆ. ಬರ ಸಮಸ್ಯೆಗೆ ಪರಿಹಾರ ಹುಡುಕುವ ಬದಲು ಮುಂದಿನ ಸಿಎಂ ಯಾರು ಎಂಬ ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ನಷ್ಟದ ಸಮರ್ಪಕ ಅಂದಾಜು ನೀಡದ ಹೊರತು ಕೇಂದ್ರದಿಂದ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಕಡಿಮೆ. ಕೇಂದ್ರ ತಂಡಗಳು ಬರ ಪರಿಸ್ಥಿತಿ ಅಧ್ಯಯನ ನಡೆಸಿದ್ದು, ರಾಜ್ಯ ಸರ್ಕಾರವೂ ವರದಿ ಕಳುಹಿಸಬೇಕು. ಇವೆರಡರ ವರದಿಗಳನ್ನು ಹೋಲಿಸಿ, ಎನ್‌ ಡಿಆರ್‌ ಎಫ್ ಮಾರ್ಗಸೂಚಿಗಳ ಪ್ರಕಾರ ಕೇಂದ್ರವು ಹಣವನ್ನು ಬಿಡುಗಡೆ ಮಾಡುತ್ತದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬರದ ಛಾಯೆ ಹಾಗೂ ವಿದ್ಯುತ್ ಕ್ಷಾಮ ತಲೆದೂರಿದು ರಾಜ್ಯ ಸರ್ಕಾರ ಆಂತರಿಕ ಕಚ್ಚಾಟಕ್ಕೆ ಸಿಲುಕಿ ಜನರ ಸಮಸ್ಯೆಯನ್ನು ಬರದ ಸಂಕಷ್ಟ ಎರಡನ್ನು ಮರೆತಿದೆ. ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕರು ಸಚಿವರು ಕೇಂದ್ರದ ಮೇಲೆ ಗೂಬೆಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ತತ್ ಕ್ಷಣಕ್ಕೆ ಬರ ಅಧ್ಯಯನ ತಂಡ ಕಳಿಸಿಕೊಟ್ಟಿದೆ. ರಾಜ್ಯ ಸರಕಾರ ಬರದಿಂದ ಏನೆಲ್ಲಾ ಹಾನಿಯಾಗಿದೆ ಎಷ್ಟು ವೆಚ್ಚ ತಗಲಲ್ಲಿದೆ ಎಂಬುದರ ಪ್ರಸ್ತಾವನೆಯನ್ನೇ ಇದುವರೆಗೂ ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಸರ್ಕಾರ ಪತನವಾಗಲಿದೆ ಎಂದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ.

RELATED ARTICLES
- Advertisment -
Google search engine

Most Popular