Wednesday, May 21, 2025
Google search engine

Homeಅಪರಾಧಮಂಗಳೂರು ಕೊಲೆ ಪ್ರಕರಣ:ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರು

ಮಂಗಳೂರು ಕೊಲೆ ಪ್ರಕರಣ:ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರು

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಮಂಗಳವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನವೆಂಬರ್ 22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ.
ಸೋಮವಾರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರ ತಂಡ ತಲವಾರಿನಿಂದ ಹತ್ಯೆ ಮಾಡಿತ್ತು. ಅದಾದ ಬಳಿಕ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.

RELATED ARTICLES
- Advertisment -
Google search engine

Most Popular