Thursday, May 22, 2025
Google search engine

Homeರಾಜ್ಯಸುದ್ದಿಜಾಲಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಎಸ್.ಮಂಜು

ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಎಸ್.ಮಂಜು

ರಾಮನಗರ: ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಹೊಣೆ ಮತ್ತುಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಅಧಿಕಾರಿಗಳು ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗದ ಸದಸ್ಯ ಎಸ್. ಮಂಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬, ಪೋಕ್ಸೋ ೨೦೧೨, ಮಕ್ಕಳ ನ್ಯಾಯ (ಮಕ್ಕಳ ಪಾಲನೆ ಮತ್ತು ಪೋಷಣೆ) ಕಾಯ್ದೆ-೨೦೨೧ ಮತ್ತು ಬಾಲಕಾರ್ಮಿಕ ನಿಷೇಧ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-೧೯೮೬ರ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂಗನವಾಡಿಗಳಿಗೆ ಜನನ ಪ್ರಮಾಣ ಪತ್ರವಿಲ್ಲದಿದ್ದರು ಸಹಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಬೇಕು, ಹಾಗೂ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವ ಸಂದರ್ಭದಲ್ಲಿಯಾವುದೇಅಡ್ಡಿಪಡಿಸಬಾರದು.ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆಅಧಿಕಾರಿಗಳು ಕ್ರಮವಹಿಸಿ ಎಂದರು. ಮಕ್ಕಳು ಅಂಗನವಾಡಿ ಮತ್ತು ಶಾಲೆಗಳಲ್ಲಿ ಹಾಜರಾತಿಕಡಿಮೆಆಗುತ್ತಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿಬೇಕು ಮತ್ತು ಹಾಜರಾತಿಕಡಿಮೆಆಗುತ್ತಿರುವಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲುಕ್ರಮವಹಿಸಬೇಕು ಎಂದರು. ಮಕ್ಕಳು ತಮ್ಮ ಭವಿಷ್ಯವನ್ನುರೂಪಿಸಿಕೊಳ್ಳಲು ಸಹಕರಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಿದಂತೆಆಗುತ್ತದೆ.ಆದುದರಿಂದಅಂಗನವಾಡಿ, ಶಾಲೆ, ವಸತಿ ನಿಲಯಗಳಲ್ಲಿ ಸ್ವಚ್ಛತೆಕಾಪಾಡಬೇಕು.ಮಕ್ಕಳು ಯಾವುದೇ ಮೂಲಭೂತ ಸೌಲಭ್ಯದಿಂದ ವಂಚಿತರಾಗದಂತೆ ಕ್ರಮವಹಿಸಿಸಬೇಕು. ಮಕ್ಕಳ ಶಿಕ್ಷಣ ಹಾಗೂ ಆರೋಗ್ಯಕುರಿತು ಪೋಷಕರಲ್ಲಿಅರಿವು ಮೂಡಿಸಿದರೆ ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳು ಕಡಿಮೆ ಯಾಗುತ್ತದೆಎಂದರು.

ಪೋಕ್ಸೋಪ್ರಕರಣಗಳ ಕುರಿತುಶಿಕ್ಷಕರು ಮಕ್ಕಳಿಗೆ ಹಾಗೂ ಪೋಷಕರಿಗೆಅರಿವು ಮೂಡಿಸಿದರೆ ಈ ಪ್ರಕರಣಗಳನ್ನು ತಡೆಗಟ್ಟಬಹುದು.ಆಶಾ ಕಾರ್ಯಕರ್ತೆಯರನ್ನು ಉಪಯೋಗಿಸಿಕೊಂಡು ಬಾಲ್ಯ ವಿವಾಹವನ್ನುತಡೆಗಟ್ಟಲು ಕ್ರಮವಹಿಸಿ ಎಂದರು. ಪ್ರತಿ ಶಾಲಾ ಮತ್ತು ಕಾಲೇಜುಗಳಲ್ಲಿ ಆಂಟಿಡ್ರಗ್ಸ್‌ಕ್ಲಬ್‌ಹಾಗೂ ಮಕ್ಕಳ ಹಕ್ಕುಗಳ ಕ್ಲಬ್‌ಗಳನ್ನು ಮಾಡಬೇಕು.ಪ್ರೌಢ ಶಾಲೆಗಳಲ್ಲಿ ಮಕ್ಕಳಿಗೆ ಪೋಕ್ಸೋಕಾಯ್ದೆ, ಬಾಲ್ಯ ವಿವಾಹ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತುಅರಿವು ಮೂಡಿಸುವಂತೆ ತಿಳಿಸಿದರು.

ಸಭೆಯಲ್ಲಿಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ, ಅನಿತಾಎನ್.ಪಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಿಕ್ಕಸುಬ್ಬಯ್ಯ, ಉಪವಿಭಾಗಾಧಿಕಾರಿ ಬಿನೋಯ್,ಉಪ ಪೊಲೀಸ್ ವರಿಷ್ಠಾಧಿಕಾರಿದಿನಕರ್‌ಶೆಟ್ಟಿ,ಮಕ್ಕಳ ರಕ್ಷಣಾಧಿಕಾರಿ ನಾಗವೇಣಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular