Wednesday, May 21, 2025
Google search engine

Homeರಾಜ್ಯಸುದ್ದಿಜಾಲಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ : ನ್ಯಾಯಾಧೀಶ ಬಿ.ಎಸ್. ಭಾರತಿ

ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ : ನ್ಯಾಯಾಧೀಶ ಬಿ.ಎಸ್. ಭಾರತಿ

ಚಾಮರಾಜನಗರ: ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಮೂಲಕ ಅಧಿಕಾರಿಗಳು ಬಾಲ್ಯವಿವಾಹ ತಡೆಗಟ್ಟಲು ಮುಂದಾಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಎಸ್. ಭಾರತಿ ಅವರು ತಿಳಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಜನರಿಗೆ ಬಾಲ್ಯವಿವಾಹದಿಂದ ಆಗಬಹುದಾದ ದುಷ್ಪರಿಣಾಮ ಹಾಗೂ ಕಾಯ್ದೆಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹವು ಹೆಚ್ಚಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲರ ಸಹಕಾರ ಪಡೆದು ಬಾಲ್ಯವಿವಾಹ ತಡೆಗಟ್ಟಬೇಕು ಎಂದರು. ಸಮಾಜದಲ್ಲಿ ನಡೆಯುವ ದೌರ್ಜನ್ಯಗಳ ಬಗ್ಗೆ ಯಾರು ಕೂಡ ಮೌನ ವಹಿಸಬಾರದು. ಮುಕ್ತವಾಗಿ ಸಂಬಂಧಿಸಿದ ಇಲಾಖೆಗಳಿಗೆ ಜೊತೆ ಮಾತನಾಡಿ ಕಾನೂನಿನ ಸೌಲಭ್ಯ ಪಡೆಯಬಹುದು. ಪೋಷಕರು ಮಕ್ಕಳ ಮೇಲಿನ ದೌರ್ಜನ್ಯಗಳ ಬಗ್ಗೆ ಜಾಗೃತರಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಎಸ್. ಭಾರತಿ ಅವರು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಧರ. ಎಂ ಅವರು ಮಾತನಾಡಿ ಜನರಿಗೆ ಕಾನೂನಿನ ಸಾಮಾನ್ಯ ಅರಿವು ಅಗತ್ಯವಾಗಿದೆ. ಕಾನೂನಿನ ಅರಿವು ಮತ್ತು ನೆರವು ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಒದಗಿಸುತ್ತದೆ. ಪರಿಶಿಷ್ಟ ಜಾತಿ, ಪಂಗಡ, ಮಹಿಳೆಯರು, ಮಕ್ಕಳು ಹಾಗೂ 3 ಲಕ್ಷ ರೂ. ಗಿಂತ ಆದಾಯ ಕಡಿಮೆ ಇರುವ ಎಲ್ಲಾ ವರ್ಗದ ಜನರಿಗೆ ಕಾನೂನು ಪ್ರಾಧಿಕಾರವು ನೆರವು ನೀಡುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಕ್ಕಳಿಗೆ ಮದುವೆ ಮಾಡಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಮುಗಿಯುವುದಿಲ್ಲ. ಮಕ್ಕಳಿಗೆ ಶಿಕ್ಷಣ ಪಡೆಯಲು ಮೊದಲು ಉತ್ತೇಜನ ನೀಡಬೇಕು. ಮಕ್ಕಳ ಭವಿಷ್ಯ ಹಸನಾಗಲು ಚಿಂತಿಸಬೇಕು. ಬಾಲ್ಯ ವಿವಾಹದಿಂದ ಅಪ್ರಾಪ್ತರ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು ಎಂದರು.

RELATED ARTICLES
- Advertisment -
Google search engine

Most Popular