Monday, February 16, 2026
Google search engine

Homeಅಪರಾಧ9 ತಿಂಗಳ ಮಗುವಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ: ಅಜ್ಜಿ ಮೇಲೆ ಆರೋಪ ಮಾಡಿದ ತಾಯಿ

9 ತಿಂಗಳ ಮಗುವಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ: ಅಜ್ಜಿ ಮೇಲೆ ಆರೋಪ ಮಾಡಿದ ತಾಯಿ

ಗದಗ: ಒಂಬತ್ತು ತಿಂಗಳ ಹಸುಗೂಸಿಗೆ ಎಲೆ, ಅಡಿಕೆ ತಿನ್ನಿಸಿ ಅಜ್ಜಿ ಕೊಲೆ ಮಾಡಿರುವ  ಘಟನೆ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ನಡೆದಿದೆ.

ನವೆಂಬರ್ 22 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅತ್ತೆ ಸರೋಜಾನೇ ನನ್ನ ಮಗುವನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮಗುವಿನ ತಾಯಿ ನಾಗರತ್ನ ಅತ್ತೆ ಸರೋಜಾ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೆರಿಗೆಯಾದ 5 ತಿಂಗಳ ಬಳಿಕ ನಾಗರತ್ನ ಗಂಡನ ಮನೆಗೆ ಬಂದಿದ್ದರು. ಈ ವೇಳೆ ಅತ್ತೆ ಸರೋಜಾ “ಇಷ್ಟು ಬೇಗ ಮಗು ಬೇಕಿತ್ತಾ” ಅಂತ ಪ್ರಶ್ನೆ ಮಾಡಿದ್ದಾರೆ. ಇದೇ ಕೋಪದಲ್ಲಿ ಮಗುವಿಗೆ ಅಡಕೆ ಹೋಳು, ಎಲೆ ತಿನ್ನಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿ.

ನ.22ರಂದು ಮಗುವಿನ ಅಂತ್ಯಸಂಸ್ಕಾರ ನೆರವೇರಿತ್ತು. ಈ ಬಳಿಕ ಮಗುವಿನ ತಾಯಿ ನಾಗರತ್ನ ದೂರು ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ (ನ.24) ರಂದು ಶವ ಹೊರತೆಗೆದು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಸ್ಥಳಕ್ಕೆ ಗದಗ ಎಸಿ ವೆಂಕಟೇಶ‌ ನಾಯಕ್, ಸಿಪಿಐ ಎಸ್ ​ಎಸ್ ಬೀಳಗಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

RELATED ARTICLES
- Advertisment -
Google search engine

Most Popular