Monday, February 16, 2026
Google search engine

Homeರಾಜ್ಯಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ.

ವಿದ್ಯುತ್ ತಂತಿ ತಗುಲಿ ಶ್ರೇಯಸ್ ಶಿನ್ನೂರ(16) ಮೃತಪಟ್ಟಿದ್ದಾನೆ.

ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ ತಗುಲಿ ಶ್ರೇಯಸ್ ಅಸ್ವಸ್ಥಗೊಂಡಿದ್ದ. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಶ್ರೇಯಸ್ ‘ನ್ನು ಕಾಪಾಡಲು ಹೋದ ಗೆಳೆಯನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ನಿನ್ನೆ ಸಂಜೆ ಶ್ರೇಯಸ್ ಹಾಗೂ ಆತನ ಸ್ನೇಹಿತರು ಮನೆ ಮಹಡಿ ಮೇಲೆ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಬಾಲ್ ಕ್ಯಾಚ್ ಹಿಡಿಯಲು ಹೋಗಿ ಶ್ರೇಯಸ್​ ಗೆ ವಿದ್ಯುತ್ ತಂತಿ ತಗುಲಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ. ಜೊತೆಗೆ ಶ್ರೇಯಸ್ ಜೊತೆಗಿದ್ದ ಬಾಲಕನಿಗೂ ಗಾಯಗಳಾಗಿವೆ.

RELATED ARTICLES
- Advertisment -
Google search engine

Most Popular