Friday, May 23, 2025
Google search engine

Homeರಾಜ್ಯತೆಲಂಗಾಣದಲ್ಲಿ ಗ್ಯಾರಂಟಿ ಕೆಲಸ ಮಾಡದೇ ಕಾಂಗ್ರೆಸ್ ಗೆಲುವು ಸಾಧಿಸಿತಾ: ಸಿಎಂ ಸಿದ್ದರಾಮಯ್ಯ

ತೆಲಂಗಾಣದಲ್ಲಿ ಗ್ಯಾರಂಟಿ ಕೆಲಸ ಮಾಡದೇ ಕಾಂಗ್ರೆಸ್ ಗೆಲುವು ಸಾಧಿಸಿತಾ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇವತ್ತಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಕೆಲವು ಬಿಲ್ ಗಳು ಇವೆ. ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲು ನಮ್ಮ ಸರ್ಕಾರ ತಯಾರಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರೆಂಟಿಗಳು ವರ್ಕೌಟ್ ಆಗಲಿಲ್ಲ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ, ಗ್ಯಾರೆಂಟಿ ವರ್ಕೌಟ್ ಆಗದೇ ತೆಲಂಗಾಣ ರಾಜ್ಯದಲ್ಲಿ ಗೆದ್ದೆವಾ ಮಧ್ಯಪ್ರದೇಶದಲ್ಲಿ ಅಲ್ಲಿನ ಮುಖ್ಯಮಂತ್ರಿ ಗ್ಯಾರೆಂಟಿ ಘೋಷಣೆ ಮಾಡಿದ್ದರಲ್ಲಾ, ಎಲ್ಲ ಧರ್ಮ, ಜಾತಿಯ ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ತುಂಬುವ ಉದ್ದೇಶದಿಂದ ಮಾಡಿರುವ ಕಾರ್ಯಕ್ರಮಗಳು ಇವು ರಾಜ್ಯದ ಹಣ ತೆಗೆದುಕೊಂಡು ತೆಲಂಗಾಣದಲ್ಲಿ ಜಾತ್ರೆ ಮಾಡಿದರು ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರು ಯಾವುದರ ಮೇಲೆ ಗೆದ್ದರು ನಾವು ಚುನಾವಣೆ ಗೆಲ್ಲಬೇಕು ಅಂತಾ ಅಲ್ಲ. ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಆರು ತಿಂಗಳು ಬೇಕಾಯಿತು. ನಮ್ಮ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ ಎಂದು ಹೆಳಿದರು.

RELATED ARTICLES
- Advertisment -
Google search engine

Most Popular