ಬೆಳಗಾವಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಹೀಗಾಗಿ ರಾಜ್ಯಸಭಾ ಕಲಾಪದಲ್ಲಿ ನಟ, ಶಾಸಕ ಜಗ್ಗೇಶ್ ಅವರು ಕನ್ನಡದಲ್ಲಿಯೇ ಮಾತನಾಡಿ ಕನ್ನಡಿಗರ ಗಮನ ಸೆಳೆದಿದ್ದಾರೆ.
ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಬ್ಯಾಂಕ್‌ಗಳು ಸೇರಿದಂತೆ ವಿವಿಧ ಸಂಸ್ಥೆಗಳ ಫ್ರಂಟ್ ಡೆಸ್ಕ್‌ನಲ್ಲಿ ಕನ್ನಡ ಮಾತನ್ನಾಡೋರನ್ನೇ ನೇಮಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಪ್ರಧಾನಿ ಮೋದಿ ಸರ್ಕಾರ ಯಾವಾಗಲೂ ಪ್ರಾದೇಶಿಕ ಭಾಷೆಯನ್ನು ಪ್ರೋತ್ಸಾಹಿಸುತ್ತದೆ. ಈ ಪ್ರಯತ್ನಗಳ ಹೊರತಾಗಿಯೂ ಕೆಲವು ಬ್ಯಾಂಕ್ ಗಳು, ಸಾರ್ವಜನಿಕ ಸಂಸ್ಥೆಗಳು, ಎಂಎನ್‌ಸಿ ಕಂಪನಿಗಳು ಕರ್ನಾಟಕದಲ್ಲಿ ಕನ್ನಡ ಮಾತನಾಡೋರನ್ನು ಫ್ರಂಟ್ ಡೆಸ್ಕ್ ಗಳಲ್ಲಿ ನೇಮಿಸಿಕೊಳ್ಳುತ್ತಿಲ್ಲ. ಇದರಿಂದ ಸ್ಥಳೀಯ ಜನರು ಅವರೊಂದಿಗೆ ಸಂವಾದ ನಡೆಸೋದು ತುಂಬಾ ಕಷ್ಟ. ಸ್ಥಳೀಯರು ಅವರನ್ನು ನೋಡಿದಾಗ ಹೊರಗಿನವರು ಎಂಬ ಭಾವನೆ ಬರುತ್ತದೆ ಎಂದಿದ್ದಾರೆ.