ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನವನ್ನು ಶಾಸಕರಾದ ಕೆ.ಗೋಪಾಲಯ್ಯನವರು ಪಡೆದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೀಲಾವತಿ ಅವರ ನಿಧನದ ಸುದ್ದಿ ತಿಳಿದು ಬಹಳ ದುಖವಾಗಿದೆ. ಲೀಲಾವತಿ ಅವರು ಬಹುಭಾಷಾ ನಟಿಯಾಗಿದ್ದು, ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರಕ್ಕೆ ಅಪಾರವಾದಂತಹ ಕೊಡುಗೆಯನ್ನು ನೀಡಿದ್ದಾರೆ. ಇವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗಕ್ಕೆ ತುಂಬಲಾಗದ ನಷ್ಟವಾಗಿದೆ ಎಂದರು.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಹೇಳಿದರು.
ಮಾಜಿ ಶಾಸಕ ನೆ.ಲ ನರೇಂದ್ರಬಾಬು, ಚಲನಚಿತ್ರ ನಟ ನಟಿಯರು ಹಾಗೂ ಇತರರು ಇದ್ದರು.