Tuesday, February 17, 2026
Google search engine

Homeರಾಜ್ಯಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು, ಸಿ.ಎಂ ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ

ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು, ಸಿ.ಎಂ ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು ಅವರನ್ನು ಉಚ್ಛಾಟನೆ ಮಾಡಿ ಜೆಡಿಎಸ್​ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಿರ್ಣಯ ಕೈಗೊಳ್ಳಲಾಗಿದೆ. ಈಗಾಗಲೇ ಪಕ್ಷದಿಂದ ಅಮಾನತುಗೊಂಡಿದ್ದ ಸಿ ಎಂ ಇಬ್ರಾಹಿಂ ಅವರನ್ನೂ ಉಚ್ಛಾಟನೆ ಮಾಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ.

ಇಂದು ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ನೀಡಲಾಗಿದೆ.

ಜೆಡಿಎಸ್ ಕಚೇರಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿಯ ಎಲ್ಲಾ ಸದಸ್ಯರು, ಇತರ ರಾಜ್ಯ ಘಟಕಗಳ ಅಧ್ಯಕ್ಷರು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular