Wednesday, May 21, 2025
Google search engine

Homeರಾಜ್ಯಸುದ್ದಿಜಾಲಡಿ.12ರಿಂದ ಮೈಸೂರಿನಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಡಿ.12ರಿಂದ ಮೈಸೂರಿನಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಮೈಸೂರು : ಡಿ.೧೨ ರಿಂದ ನಗರದ ಕ್ಯೂ ಸ್ಟಾರ್ ಹೋಟೆಲ್‌ನಲ್ಲಿ ಎರಡು ದಿನಗಳ ಕಾಲ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ರಫತ್ ಖಾನ್ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಡಿ.೧೨ ರಂದು ಬೆಳ್ಗಿಗೆ ೧೦ ಗಂಟೆಗೆ ನಡೆಯುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ.ಫೈಝಿ ಉದ್ಘಾಟಿಸುವರು. ಸಂಜೆ ತನಕ ಸಭೆ ನಡೆಯಲಿದ್ದು, ಸಂಜೆ ೬ ಗಂಟೆಗೆ ಕ್ಯೂ ಸ್ಟಾರ್ ಹೋಟೆಲ್‌ನಿಂದ ರಾಜೀವ್ ನಗರದ ದಸ್ತಗೀರ್ ಫಂಕ್ಷನ್ ಹಾಲ್ ತನಕ ಎಸ್‌ಡಿಪಿಐ ಕಾರ್ಯಕರ್ತರ ಜಾಥಾ ನಡೆಸಲಾಗುವುದು. ಬಳಿಕ ಅಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳ ಬಗ್ಗೆ ವಿಚಾರ ವಿನಿಮಯ ಹಾಗೂ ಪಕ್ಷದ ಹೋರಾಟಗಳ ರೂಪುರೇಷೆಗಳ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚರ್ಚೆ ನಡೆಸಲಾಗುವುದು. ಕಾರ್ಯಕಾರಿಣಿಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular