Wednesday, May 21, 2025
Google search engine

Homeಸ್ಥಳೀಯಷಷ್ಠಿ: ಸಿದ್ದಲಿಂಗಪುರದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ರದ್ದು

ಷಷ್ಠಿ: ಸಿದ್ದಲಿಂಗಪುರದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ರದ್ದು

ಮೈಸೂರು: ಸಿದ್ದಲಿಂಗಪುರದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಅಂಗವಾಗಿ ಪ್ರತಿ ವರ್ಷ ನಡೆಯುತ್ತಿದ್ದ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ.

ಡಿಸೆಂಬರ್ 18 ರಂದು ಸುಬ್ರಹ್ಮಣ್ಯ ಷಷ್ಠಿ ಆಚರಣೆ ಇದೆ. ಸಿದ್ದಲಿಂಗಪುರದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಅಂಗವಾಗಿ ಪ್ರತಿ ವರ್ಷ ವಿಜೃಂಬಣೆಯಿಂದ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಆದರೆ ದೇವಾಲಯದ ಅಭಿವೃದ್ದಿ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಈ ಬಾರಿ ಜಾತ್ರಾಮಹೋತ್ಸವ ರದ್ದುಪಡಿಸಲಾಗಿದ್ದು, ಅದ್ದೂರಿ ಪೂಜಾ ಕೈಂಕರ್ಯಗಳು ನಡೆಯುವುದಿಲ್ಲ.

ಹೀಗಾಗಿ ಸಾರ್ವಜನಿಕರಿಗೆ, ಸುತ್ತಮುತ್ತಲಿನ ಗ್ರಾಮಸ್ಥರಿಗೆ ಮಾಹಿತಿ ನೀಡುವಂತೆ ಮೇಟಗಳ್ಳಿ ಠಾಣೆ ನಿರೀಕ್ಷಕರು ಸಿದ್ದಲಿಂಗಪುರ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular