ಮದ್ದೂರು: ಸಾರ್ವಜನಿಕರು ವಿನಾಕಾರಣ ಕಂದಾಯ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ಮುಖ್ಯಮಂತ್ರಿಗಳ ನಿರ್ದೇಶನದ ಅನ್ವಯ ಜನತಾದರ್ಶನ ಕಾರ್ಯಕ್ರಮವನ್ನು ಪ್ರತಿ ತಾಲೂಕು ಹಂತದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ ಅವರು ಹೇಳಿದರು.
ಮದ್ದೂರು ಪಟ್ಟಣದ ಶಿವಪುರದ ವೆಂಕಟೇಶ್ವರ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಾರ್ವಜನಿಕರು ವಿನಾಕಾರಣ ಸಣ್ಣಪುಟ್ಟ ಕೆಲಸಗಳಿಗಾಗಿ ವಿಧಾನಸೌಧ ಸೇರಿದಂತೆ ಸರ್ಕಾರದ ಕೇಂದ್ರ ಮಟ್ಟಕ್ಕೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪ್ರತಿ ತಾಲೂಕಿನಲ್ಲೂ ಜನತಾದರ್ಶನ ಮಾಡಿ ಜನರ ಹವಾಲುಗಳನ್ನು ಸ್ವೀಕರಿಸ ಅವುಗಳನ್ನು ಸ್ಥಳದಲ್ಲೇ ಬಗೆಹರಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಿ ಬಗೆಹರಿಸಲಾರದ ಸಮಸ್ಯೆಗಳನ್ನು 15 ದಿನದೊಳಗೆ ಸಂಬಂಧಪಟ್ಟವರಿಗೆ ಸೂಚಿಸಿ ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದರು.
ಮಂಡ್ಯ ಜಿಲ್ಲೆಯ ರೈತರು ಬರ ಪರಿಹಾರವನ್ನು ಪಡೆಯಲು ನೋಂದಿಸಿಕೊಳ್ಳಬೇಕು ನಮ್ಮ ಜಿಲ್ಲೆಯಲ್ಲಿ 68 ರಷ್ಟು ಮಾತ್ರ ರೈತರು ಉಳಿದ ಜಿಲ್ಲೆಗಳಿಗಿಂತ ಕಡಿಮೆಯಾಗಿದೆ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿಯವರು ನಮ್ಮ ಜಿಲ್ಲೆಯವರು ಆಗಿರುವುದರಿಂದ ಶೇಕಡ ನೂರರಷ್ಟು ಮಾಡಿಸುವ ಮೂಲಕ ದಾಖಲೆ ಸೃಷ್ಟಿಸಲು ರೈತರು ಸಹಕಾರ ನೀಡಬೇಕು ಹಾಗೂ ಆ ಮೂಲಕ ಬರ ಪರಿಹಾರವನ್ನು ಪಡೆದು ಮುಂದಿನ ದಿನಗಳಲ್ಲಿ ಸಿಗುವ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈಗಾಗಲೇ ತಹಶೀಲ್ದಾರ್ ಹಾಗೂ ಉಪ ವಿಭಾಗ ಅಧಿಕಾರಿಗಳ ನ್ಯಾಯಾಲಯದಲ್ಲಿದ್ದ ಪ್ರಕರಣಗಳನ್ನು ಬಹು ಪಾಲು ಬಗೆಹರಿಸಲಾಗಿದೆ ಜಿಲ್ಲಾಧಿಕಾರಿ ಹಾಗೂ ಅಪಾರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಬಹುಬೇಗ ಇತ್ಯರ್ಥ ಮಾಡಲಾಗುವುದು. ಮಂಡ್ಯ ಜಿಲ್ಲೆಯನ್ನು ಪೌತಿ ಖಾತಾ ಆಂದೋಲನ ಮುಕ್ತ ಮಾಡಲು ಪಣ ತೊಡಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಕೆ.ಎಂ. ಉದಯವರು ಮಾತನಾಡಿ, ಮಂಡ್ಯ ಜಿಲ್ಲೆಯ ಆರು ತಾಲೂಕಿನಲ್ಲಿರುವ ಸಮಸ್ಯೆ ಮದ್ದೂರು ತಾಲೂಕಿನಲ್ಲುೊಂದರಲ್ಲಿ ಇದೆ ಹಿಂದೆ ಕರಾಳ ದಿನಗಳನ್ನು ಕಂಡಿರುವ ಮದ್ದೂರು ವಿಧಾನಸಭಾ ಕ್ಷೇತ್ರ ಈಗ ಹಂತ ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕುಂದು ಕೊರತೆ ಸಭೆಗಳನ್ನು ಮಾಡಿ ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಲಾಗುವುದು ಈಗಾಗಲೇ ಇ- ಸ್ವತ್ತು ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ಮುಂದೆ ಪೌತಿ ಖಾತೆಯ ಅಂದೋಲನ ಮಾಸಾಸನ ಸಮರ್ಪಕವಾಗಿ ಜಾರಿ ಮಾಡಲು ಬದ್ಧವಾಗುತ್ತವೆ ಎಂದರು.
ಅಪಾರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜು ಉಪ ವಿಭಾಗಾಧಿಕಾರಿ ಎಂ ಶಿವಮೂರ್ತಿ ತಹಶೀಲ್ದಾರ್ ಸೋಮಶೇಖರ್ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಣ ಅಧಿಕಾರಿ ಸಂದೀಪ್, ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.