Saturday, May 24, 2025
Google search engine

Homeರಾಜ್ಯಸುದ್ದಿಜಾಲನಾಳೆ ನಗರದಲ್ಲಿ ರೈತ ದಿನಾಚರಣೆ, ಜಿಲ್ಲಾಮಟ್ಟದ ಸಿರಿಧಾನ್ಯ ಹಬ್ಬ, ಸಿರಿಧಾನ್ಯ ನಡಿಗೆ ಕಾರ್ಯಕ್ರಮ

ನಾಳೆ ನಗರದಲ್ಲಿ ರೈತ ದಿನಾಚರಣೆ, ಜಿಲ್ಲಾಮಟ್ಟದ ಸಿರಿಧಾನ್ಯ ಹಬ್ಬ, ಸಿರಿಧಾನ್ಯ ನಡಿಗೆ ಕಾರ್ಯಕ್ರಮ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಜಿಲ್ಲಾ ಕೃಷಿಕ ಸಮಾಜದ ಸಹಯೋಗದೊಂದಿಗೆ ರೈತ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ನಾಳೆ ಡಿ. 23ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ವಸ್ತು ಪ್ರದರ್ಶನದ ಉದ್ಘಾಟನೆ ನೆರೆವೇರಿಸುವರು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್‍ಪ್ರಸಾದ್, ಎಂ.ಆರ್. ಮಂಜುನಾಥ್, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ. ಮಾದೇಗೌಡ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಚಿಕ್ಕಸ್ವಾಮಿ, ನಗರಸಭಾ ಸದಸ್ಯರಾದ ಮಹೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಸಿರಿಧಾನ್ಯ ನಡಿಗೆಯು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಡಳಿತ ಭವನದಿಂದ ಡಾ.ಬಿ.ಆರ್. ಅಂಬೇಡ್ಕರ್ ಭವನದವರೆಗೆ ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ವಸ್ತು ಪ್ರದರ್ಶನದ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮ ಮತ್ತು ತಾಂತ್ರಿಕ ಸಮಾವೇಶ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular