ಮಂಗಳೂರು (ದಕ್ಷಿಣ ಕನ್ನಡ): ಯಕ್ಷ ಪ್ರತಿಭೆ ಮಂಗಳೂರು ಇದರ 15 ನೇ ವರ್ಷದ ಸಂಭ್ರಮದ ನೇತೃತ್ವದಲ್ಲಿ ಕಟೀಲು ಗೋಪಾಲಕೃಷ್ಣ ಅಸ್ರಣ್ಣ, ಸಂಸ್ಮರಣಾ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮವು ಡಿಸೆಂಬರ್ 23 ಕ್ಕೆ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.