ಮದ್ದೂರು: ತಾಲೂಕಿನ ಆತಗೂರು ಹೋಬಳಿಯ ಕದಲಿಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಿನ್ನೆಲೆ ಪ್ರತಿವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆಯಿಂದ ದೇವರನ್ನು ಅಲಂಕರಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು.
ಇಂದು ಬೆಳಿಗ್ಗೆ ಐದು ಗಂಟೆಗೆ ಅಭಿಷೇಕ ಮಾಡಿ ಬಳಿಕ ದೇವರಿಗೆ ವಿಶೇಷ ಅಲಂಕಾರ ಮಾಡುವುದರ ಮೂಲಕ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು.

ಶಿಂಷಾ ನದಿಯ ಎಡ ಭಾಗದಲ್ಲಿ ಇರುವ ಲಕ್ಷ್ಮಿ ವೆಂಕಟೇಶ್ವರ ದೇವಾಲಯ 600 ವರ್ಷಗಳ ಇತಿಹಾಸ ಪ್ರಸಿದ್ಧವಾದದ್ದು ಪ್ರತಿ ವೈಕುಂಠ ಏಕಾದಶಿ ಎಂದು ಇಲ್ಲಿ ವಿಶೇಷವಾಗಿ ಅಲಂಕರಿಸಿ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.
ಎಲ್ಲರ ಸಹಕಾರದಿಂದ ದೇವಾಲಯ ಜೀರ್ಣೋದ್ಧಾರಗೊಂಡಿದೆ ಎಂದು ಲಕ್ಷ್ಮಿ ವೆಂಕಟೇಶ್ವರ ಟ್ರಸ್ಟ್ ಅಧ್ಯಕ್ಷ ಶಿವರಾಮ ಪ್ರಶಂಸೆ ವ್ಯಕ್ತಪಡಿಸಿದ್ದರು.