Monday, January 12, 2026
Google search engine

Homeಕಾಡು-ಮೇಡುಅಪರಿಚಿತ ವಾಹನ ಡಿಕ್ಕಿ ಚಿರತೆ ಮರಿ ಸಾವು

ಅಪರಿಚಿತ ವಾಹನ ಡಿಕ್ಕಿ ಚಿರತೆ ಮರಿ ಸಾವು

ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಸಾವನ್ನಪ್ಪಿದ ಘಟನೆ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಅರಬ್ಬಿತಿಟ್ಟು ವನ್ಯಧಾಮ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.ಸುಮಾರು ೪ ರಿಂದ ೫ ತಿಂಗಳ ಚಿರತೆ ಮರಿ ರಸ್ತೆಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಡಿಸಿಎಫ್ ಸೌರಭ್ ಕುಮಾರ್ ಎಸಿಎಫ್ ಮಹದೇವಯ್ಯ ಸೇರಿ ಹಲವರು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಚಿರತೆ ಮರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

RELATED ARTICLES
- Advertisment -
Google search engine

Most Popular