Saturday, May 24, 2025
Google search engine

Homeರಾಜ್ಯಸುದ್ದಿಜಾಲಡಿ.29ರಂದು ವಿಶ್ವ ಮಾನವ ದಿನ: ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ

ಡಿ.29ರಂದು ವಿಶ್ವ ಮಾನವ ದಿನ: ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ : ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ನಿಮಿತ್ತ ಡಿ.29ರಂದು ‘ವಿಶ್ವ ಮಾನವ ದಿನಾಚರಣೆ’ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ತಿಳಿಸಿದರು. ಮಂಗೇರಿ ನಗರದ ಮುತ್ತಣ್ಣ ವೃತ್ತದ ಬಳಿ ಇರುವ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಗಾಂಧಿ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ನಿಯಮಾವಳಿ ಪ್ರಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಜನವರಿ 1 ಅಮರಚಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ: ನಗರದ ಗಾಂಧಿ ಭವನದಲ್ಲಿ ವಿಶ್ವಕರ್ಮ ಅಮರರ್ಚಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಆಯೋಜಿಸಲು ನಿರ್ಧರಿಸಲಾಯಿತು. ಅಮರ ವಾಸ್ತುಶಿಲ್ಪಿ ಜಕಣಾಚಾರಿ ಅವರು ಕನ್ನಡ ಕಲಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಅಮರ ವಾಸ್ತುಶಿಲ್ಪಿ ಜಕಣಾಚಾರಿ ಅವರನ್ನು ಸ್ಮರಿಸಬೇಕು. ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮಗಳನ್ನು ನಡೆಸಲು ಅಗತ್ಯ ಕ್ರಮಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಅಮರ ವಾಸ್ತುಶಿಲ್ಪಿ ಜಕಣಾಚಾರಿ ಕುರಿತು ಸಾಕ್ಷ್ಯಚಿತ್ರವಿದ್ದರೆ, ಬಿ.ಜಿ.ಅನಂತಶಯನ ಸಲಹೆ ನೀಡಿದರು. ಕಾರ್ಯಕ್ರಮದ ವೇಳೆ ಮಕ್ಕಳಿಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

RELATED ARTICLES
- Advertisment -
Google search engine

Most Popular