Sunday, May 25, 2025
Google search engine

Homeಅಪರಾಧನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಕಾರು: 6 ಮಂದಿ ಸಾವು

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಕಾರು: 6 ಮಂದಿ ಸಾವು

ರಾಂಚಿ: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ ನ ಜಮ್ಶೆಡ್‌ ಪುರದಲ್ಲಿ ಸೋಮವಾರ (ಜ.1 ರಂದು) ನಡೆದಿದೆ.

ಕಾರಿನಲ್ಲಿ ಒಟ್ಟು 8 ಜನ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದವರು ಆದಿತ್ಯಪುರ ನಿವಾಸಿಗಳೆಂದು ತಿಳಿದು ಬಂದಿದೆ.

ಕಾರು ನಿಯಂತ್ರಣ ತಪ್ಪಿ ಡಿವೈಡರ್ ಢಿಕ್ಕಿಯಾದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular