ಧಾರವಾಡ : ಇಂದು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಧಾರವಾಡ ವತಿಯಿಂದ ಮತದಾರರ ಪಟ್ಟಿ-2024 ಕುರಿತು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಧಾರವಾಡ ವತಿಯಿಂದ ಬೈಕ್ ರ್ಯಾಲಿ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೈಕ್ ರ್ಯಾಲಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ಕೆ.ಸ್ವರೂಪ ಹಸಿರು ನಿಶಾನೆ ತೋರುವ ಮೂಲಕ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮತದಾರರ ಪಟ್ಟಿ-2024ರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಜನಜಾಗೃತಿಗೆ ಬಂದ ಎಲ್ಲ ಉಪನ್ಯಾಸಕರು ತಮ್ಮ ಕಾಲೇಜುಗಳಲ್ಲಿರುವ ಎಲ್ಲ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸಲು ಸಿದ್ಧಗೊಳಿಸಬೇಕು. ಜಿಲ್ಲೆಯ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಿಮಗೆ ಸಂದೇಹಗಳಿದ್ದರೆ, ನಿಮ್ಮ ಮಾಹಿತಿಯನ್ನು ಪಡೆಯಲು ನೀವು ಭಾರತೀಯ ಚುನಾವಣಾ ಆಯೋಗದ ಸಹಾಯವಾಣಿ, ಟೋಲ್ ಫ್ರೀ ಸಂಖ್ಯೆ 1950 ಗೆ ಕರೆ ಮಾಡಬಹುದು. ಯಾವುದೇ ಅರ್ಹ ಮತದಾರರು ಮತದಾನದಿಂದ ವಂಚಿತರಾಗದಂತೆ ಮುಂಜಾಗ್ರತೆ ವಹಿಸುವಂತೆ ಸಲಹೆ ನೀಡಿದರು. ಆರಂಭದಲ್ಲಿ ಎಲ್ಲರಿಗೂ ಪ್ರಮಾಣ ಬೋಧನೆ ಮಾಡಲಾಗುತ್ತಿತ್ತು. ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನವರ್ ಪ್ರಸ್ತಾವಿಕವಾಗಿ ಮಾತನಾಡಿ, ಯುವ ಮತದಾರರ ಜವಾಬ್ದಾರಿಯನ್ನು ಮನವರಿಕೆ ಮಾಡಿಕೊಟ್ಟರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಪಿ.ಸುರೇಶ್, ಸಂಪನ್ಮೂಲ ವ್ಯಕ್ತಿ ಕೆ.ಎಂ.ಶೇಖಾ ಹಾಗೂ ಧಾರವಾಡ ನಗರದ ವಿವಿಧ ಪಿಯು ಕಾಲೇಜುಗಳ ಉಪನ್ಯಾಸಕರು ಭಾಗವಹಿಸಿದ್ದರು. ಬೈಕ್ ರ್ಯಾಲಿ ಆರ್.ಎನ್.ಶೆಟ್ಟಿ ಕ್ರೀಡಾಂಗಣದಿಂದ ಆರಂಭವಾಗಿ ಜುಬಿಲಿ ವೃತ್ತ ಹಾಗೂ ವಿವೇಕಾನಂದ ವೃತ್ತದ ಮೂಲಕ ಹಿಂತಿರುಗಿತು. ಎನ್.ಶೆಟ್ಟಿ ಕ್ರೀಡಾಂಗಣಕ್ಕೆ ಆಗಮಿಸಿ, ಮುಗಿಸಿದರು.