ಮಂಗಳೂರು (ದಕ್ಷಿಣ ಕನ್ನಡ): ಸಂವಿಧಾನದ ಮೂಲ ಅಂಶಗಳಾದ ಧರ್ಮನಿರಪೇಕ್ಷತೆ, ಜಾತ್ಯಾತೀತತೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾವೆಲ್ಲರೂ ಗೌರವಿಸಬೇಕು. ದೇಶದ ಘನತೆ ಹಾಗೂ ಸಾರ್ವಭೌಮತೆಯನ್ನು ಎತ್ತಿ ಹಿಡಿಯಬೇಕು. ಸಂವಿಧಾನದ ಆಶಯಗಳನ್ನು ಜಾರಿ ಮಾಡಲು ನಾವೆಲ್ಲರೂ ಸಿದ್ಧರಾಗಬೇಕು. ಸಂವಿಧಾನದ ಆಶಯ ಜಾರಿಯಾದರೆ ಅದೇ ಮಹಾತ್ಮ ಗಾಂಧಿ ಆಶಿಸಿದ ನಿಜವಾದ ರಾಮರಾಜ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಮಂಗಳೂರು ನಗರದ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ನೆರವೇರಿಸಿದ ಸಂದೇಶ ಭಾಷಣ ಮಾಡಿದರು.