ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇಂದು ಜ. ೩೧ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಇಂದು ಜ. ೩೧ ರಂದು ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಬೆಳಿಗ್ಗೆ ೧೧.೩೦ ಗಂಟೆಗೆ ತುಪ್ಪದಮಡು ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨.೩೦ ಗಂಟೆಗೆ ಪಾಲಗ್ರಹಾರ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೨.೩೦ ಗಂಟೆಗೆ ಹರದನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೪.೦೦ ಗಂಟೆಗೆ ದೇವರಮಲ್ಲನಾಯಕನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೬.೦೦ ಗಂಟೆಗೆ ಬೆಳ್ಳೂರು ಕ್ರಾಸ್ – ಯಡಿಯೂರು- ಕುಣಿಗಲ್ – ನೆಲಮಂಗಲ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.