Monday, January 19, 2026
Google search engine

Homeರಾಜಕೀಯಬಡವರ ರಕ್ತ ಬಸಿದು, ಬಲಿಷ್ಠರ ಬದುಕು ಬಂಗಾರ ಮಾಡುವ ಬಜೆಟ್: ಈಶ್ವರ ಖಂಡ್ರೆ

ಬಡವರ ರಕ್ತ ಬಸಿದು, ಬಲಿಷ್ಠರ ಬದುಕು ಬಂಗಾರ ಮಾಡುವ ಬಜೆಟ್: ಈಶ್ವರ ಖಂಡ್ರೆ

ಬೆಂಗಳೂರು: ಇದು ಮಧ್ಯಂತರ ಬಜೆಟ್ – ಲೇಖಾನುದಾನ ಮಾತ್ರ. ಹೀಗಾಗಿ ಬಜೆಟ್ ಮೇಲೆ ನಮಗೆ ಯಾವುದೇ ನಿರೀಕ್ಷೆ ಇರಲಿಲ್ಲ. ಇದು ಅತ್ಯಂತ ಸಾಧಾರಣದಲ್ಲೇ ಸಾಧಾರಣ ಬಜೆಟ್. ಜನರಿಗಿದ್ದ ಎಲ್ಲ  ನಿರೀಕ್ಷೆಯನ್ನೂ ಈ ಬಜೆಟ್  ಹುಸಿ ಮಾಡಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.

2024–25ನೇ ಹಣಕಾಸು ವರ್ಷದ ಕೇಂದ್ರದ ಮಧ್ಯಂತರ ಬಜೆಟ್‌ ಅನ್ನು ನಿರ್ಮಲಾ ಸೀತಾರಾಮನ್‌ ಇಂದು ಮಂಡಿಸಿದ್ದಾರೆ.

ತೆರಿಗೆದಾರರಿಗೆ ಮತ್ತೆ ನಿರಾಶೆಯಾಗಿದೆ. ಕಾರ್ಪೊರೇಟ್ – ಸಾಂಸ್ಥಿಕ ತೆರಿಗೆಯನ್ನು ಶೇ.30ರಿಂದ ಶೇ.22ಕ್ಕೆ ಇಳಿಕೆ ಮಾಡಿರುವುದರಿಂದ ಉದ್ದಿಮೆದಾರರು ಖುಷಿಯಾಗಿರುತ್ತಾರೆ. ಬಡವರ ರಕ್ತ ಬಸಿದು, ಬಲಿಷ್ಠರ ಬದುಕು ಬಂಗಾರ ಮಾಡುವ ಕಾರ್ಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ತೊಡಗಿದೆ. ಇದು ಖಂಡನೀಯ ಎಂದರು.

18 ಲಕ್ಷ ಕೋಟಿ ರೂ. ವಿತ್ತೀಯ ಕೊರತೆಯ ಬಜೆಟ್ ಇದಾಗಿದ್ದು, ಈಗಾಗಲೇ ದೇಶವನ್ನು ಸಾಲದ ಸುಳಿಗೆ ಸಿಲುಕಿಸಿರುವ ಕೇಂದ್ರ ಬಿಜೆಪಿ ಸರ್ಕಾರ ದೇಶದ ಜನರ ಮೇಲೆ ಮತ್ತಷ್ಟು ಹೊರೆ ಹೊರಿಸುವುದರಲ್ಲಿ ಸಂದೇಹವಿಲ್ಲ ಎಂದು ಈಶ್ವರ ಖಂಡ್ರೆ ತಿಳಿಸಿದರು.

RELATED ARTICLES
- Advertisment -
Google search engine

Most Popular