ಮಂಡ್ಯ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರಿನ ಅರಮನೆ ಆವರಣದಲ್ಲಿ ಫೆಬ್ರವರಿ ೨೬ ಮತ್ತು ೨೭ ರಂದು ಬೆಳಿಗ್ಗೆ ೯.೦೦ ಗಂಟೆಗೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
೧೮ ರಿಂದ ೩೫ ವರ್ಷದ ಆಸಕ್ತ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೊ ಯಾವುದೇ ಪದವಿಯ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿದ್ದು, ತಮ್ಮ ಎಲ್ಲಾ ಮೂಲ ಸ್ವ-ವಿವರ(Resume) ಪತ್ರಗಳ ಜೆರಾಕ್ಸ್ ಮತ್ತು ಆಧಾರ್ ಕಾರ್ಡ್ ನಕಲು ಪ್ರತಿಯನ್ನು ತೆಗೆದುಕೊಂಡು ಭಾಗವಹಿಸಬಹುದಾಗಿದೆ. ಹೆಸರಾಂತ ಕಂಪನಿಗಳು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದು, https://udyogamela.skillconnect.kaushalkar.com/candidaterRegistrationgರಲ್ಲಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ. ಸಂ. ೦೮೨೩೨-೨೯೫೦೧೦ ಮತ್ತು ಸಹಾಯವಾಣಿ: ೧೮೦೦ ೫೯೯೯೯೧೮ ಅನ್ನು ಸಂಪರ್ಕಿಸಬಹುದು ಎಂದು ಮಂಡ್ಯ ಕೌಶಲ್ಯಾಭಿವೃದ್ಧಿ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.