Sunday, May 25, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ರಾಮಲಿಂಗಾರೆಡ್ಡಿ ವಿರುದ್ಧದ: ಕ್ರಿಮಿನಲ್ ಪ್ರಕರಣ ವಜಾಕ್ಕೆ ಹೈಕೋರ್ಟ್ ನಕಾರ

ಸಿಎಂ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ರಾಮಲಿಂಗಾರೆಡ್ಡಿ ವಿರುದ್ಧದ: ಕ್ರಿಮಿನಲ್ ಪ್ರಕರಣ ವಜಾಕ್ಕೆ ಹೈಕೋರ್ಟ್ ನಕಾರ

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ .ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ”ಯ ಹೈಕೋರ್ಟ್‌ನ ವಿಶೇಷ ನ್ಯಾಯಪೀಠ ಪ್ರಕಟಿಸಿದೆ. ಆರೋಪಿತ ಎಲ್ಲ ಅರ್ಜಿದಾರರೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕು” ಎಂದು ನ್ಯಾಯಪೀಠ ಆದೇಶಿಸಿದೆ. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯನ್ನು ಯಾವುದೇ ಸಮರ್ಥನೆ ನೀಡದೆ ಪ್ರತಿವಾದಿಯನ್ನಾಗಿ ಹೆಸರಿಸಲಾಗಿದೆ ಎಂಬ ಕಾರಣಕ್ಕೆ ಎಲ್ಲಾ ಅರ್ಜಿದಾರರಿಗೂ ತಲಾ ೧೦ ಸಾವಿರ ದಂಡ ವಿಧಿಸಿದೆ. ದಂಡದ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪಾವತಿಸಬೇಕು ಎಂದೂ ನಿರ್ದೇಶಿಸಲಾಗಿದೆ.

ಅರ್ಜಿದಾರರು ವಿಚಾರಣಾ ನ್ಯಾಯಾಲಯಕ್ಕೆ ಒಂದೇ ದಿನ ಹೋದರೆ ಗದ್ದಲವಾಗುತ್ತದೆ ಎಂಬ ಕಾರಣಕ್ಕೆ ವಿಭಿನ್ನ ದಿನಾಂಕಗಳನ್ನು ನಿಗದಿಪಡಿಸಿದ್ದೇನೆ. ನಿಗದಿಪಡಿಸಿರುವ ಆಯಾ ದಿನಗಳಂದು ಅರ್ಜಿದಾರರು ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಿ ನ್ಯಾಯಿಕ ಪ್ರಕ್ರಿಯೆಗೆ ಒಳಪಡಬೇಕು” ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ತಮ್ಮ ಆದೇಶದಲ್ಲಿ ವಿವರಿಸಿದ್ದಾರೆ.

ಸಿದ್ದರಾಮಯ್ಯ ಮಾರ್ಚ್ ೬ರಂದು, ರಣದೀಪ್ ಸಿಂಗ್ ಸುರ್ಜೇವಾಲಾ ಮಾರ್ಚ್ ೭ರಂದು, ಎಂ.ಬಿ.ಪಾಟೀಲ್, ರಾಮಲಿಂಗಾ ರೆಡ್ಡಿ ಮಾರ್ಚ್ ೧೫ರಂದು ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ.
ಬೆಂಗಳೂರಿನಲ್ಲಿ ಬೆಳಗಿನ ವೇಳೆ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ಇಂತಹ ಸಮಯದಲ್ಲಿ ಪ್ರತಿಭಟನೆಗೆ ರಸ್ತೆಗಿಳಿಯುವುದು ಸಾರ್ವಜನಿಕರಿಗೆ ಭಾರಿ ಸಮಸ್ಯೆ ಉಂಟು ಮಾಡುತ್ತದೆ. ನಗರದ ಬದುಕು ಈಗಾಗಲೇ ಹೆಚ್ಚೆಚ್ಚು ಅಸಹನೀಯ ಎನಿಸಿರುವಾಗ ಜನಪ್ರತಿನಿಧಿಗಳು ಈ ರೀತಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಬಾರದು. ಎಲ್ಲರಂತೆ ಅವರೂ ಕಾನೂನು ಪಾಲಿಸಬೇಕು. ಹಾಗಾದರೆ, ಮತದಾರರೂ ಕಾನೂನು ಪಾಲಿಸುತ್ತಾರೆ” ಎಂದು ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ವಿವರಿಸಿದ್ದಾರೆ.

RELATED ARTICLES
- Advertisment -
Google search engine

Most Popular