Wednesday, March 18, 2026
Google search engine

Homeಅಪರಾಧಬೈಕ್ ಗೆ ಕಾರು ಡಿಕ್ಕಿ: ದಂಪತಿ ಸಾವು

ಬೈಕ್ ಗೆ ಕಾರು ಡಿಕ್ಕಿ: ದಂಪತಿ ಸಾವು

ಹಾಸನ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ​​ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ.

ಚಂದ್ರೇಗೌಡ(52), ಹೇಮಲತಾ (45) ಮೃತ ದಂಪತಿ.

ಉದಯಪುರ ಗ್ರಾಮದಲ್ಲಿ ಮದುವೆ ಮುಗಿಸಿ ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ತಿರುವಿನಲ್ಲಿ ಹಿಂಬದಿಯಿಂದ ಬೈಕ್‌ ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES
- Advertisment -
Google search engine

Most Popular