Friday, May 23, 2025
Google search engine

Homeರಾಜ್ಯಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದಂಡ ವಿಧಿಸಿದ್ದ ಪ್ರಕರಣ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದಂಡ ವಿಧಿಸಿದ್ದ ಪ್ರಕರಣ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ೧೦ ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ಮಾರ್ಚ್ ೬ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ. ಕೆ. ಮಿಶ್ರಾ ಅವರಿದ್ದ ಪೀಠ ವಿಚಾರಣೆ ನಡೆಸಿ ಕರ್ನಾಟಕ ಸರ್ಕಾರ ಮತ್ತು ಪ್ರಕರಣದ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ೨೦೨೨ರ ಏಪ್ರಿಲ್ ೧೪ರಂದು ಬೆಂಗಳೂರಿನ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದರು.

ಈ ವೇಳೆ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಅಡಿಯಲ್ಲಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ ೧೪೩ (ಕಾನೂನು ಬಾಹಿರವಾಗಿ ಸಮಾವೇಶಗೊಳ್ಳುವುದು) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ ೧೦೩ರ ಅಡಿ ಪ್ರಕರಣ ದಾಖಲಿಸಿದ್ದರು. `ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯನ್ನು ಯಾವುದೇ ಸಮರ್ಥನೆ ನೀಡದೆ ಪ್ರತಿವಾದಿಯನ್ನಾಗಿ ಹೆಸರಿಸಲಾಗಿದೆ’ ಎಂಬ ಕಾರಣಕ್ಕೆ ಎಲ್ಲ ಅರ್ಜಿದಾರರಿಗೂ ಹೈಕೋರ್ಟ್ ತಲಾ ೧೦ ಸಾವಿರ ದಂಡ ವಿಧಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

RELATED ARTICLES
- Advertisment -
Google search engine

Most Popular