Tuesday, May 20, 2025
Google search engine

Homeರಾಜಕೀಯಕಾಂಗ್ರೆಸ್‌ನ 44 ಮುಖಂಡರು, ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಕಾಂಗ್ರೆಸ್‌ನ 44 ಮುಖಂಡರು, ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಬೆಂಗಳೂರು: ತಿಂಗಳ ಹಿಂದಷ್ಟೇ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಕಾರ್ಯಕರ್ತರಿಗೂ ಶುಭ ಸುದ್ದಿ ನೀಡಿದೆ. ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಬಹಳಷ್ಟು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ನೇಮಕ ಪ್ರಹಸನಕ್ಕೆ ಕೊನೆಗೂ ತೆರೆಬಿದ್ದಂತಾಗಿದೆ. ಶಾಸಕರಿಗೆ ಹಾಗೂ ಕಾರ್ಯಕರ್ತರನ್ನು ನಿಗಮ ಮಂಡಳಿಗೆ ನೇಮಕ ಮಾಡುವ ವಿಚಾರವಾಗಿ ಬಹಳಷ್ಟು ಸಮಸ್ಯೆಗಳನ್ನು ಕಾಂಗ್ರೆಸ್ ಸರ್ಕಾರ ಎದುರಿಸಿತ್ತು.

ಯಾರಿಗೆ ಯಾವ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ?

ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
ಮುಂಡರಗಿ ನಾಗರಾಜು – ಬಾಬು ಜಗಜೀವನ್​ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
ಬಿ.ಹೆಚ್​.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
ಡಾ.ಅಂಶುಮಂತ್​ – ಭದ್ರಾ ಕಾಡಾ ಅಧ್ಯಕ್ಷ
ಜೆ.ಎಸ್​.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಎಸ್​.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ
ಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ
ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ

ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಜನವರಿ 26ರಂದು ರಾಜ್ಯ ಸರ್ಕಾರ ನೇಮಕ ಮಾಡಿತ್ತು. ಒಂದು ಹಂತದಲ್ಲಿ ನಿಗಮ ಮಂಡಳಿ ನೇಮಕ ವಿಚಾರವಾಗಿ ಹೈಕಮಾಂಡ್ ಜತೆಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂಘರ್ಷಕ್ಕೆ ಇಳಿದಿದ್ದರು. ಅಂತಿಮವಾಗಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಂಡು ನೇಮಕ ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿತ್ತು. ಇದೀಗ ಕಾರ್ಯಕರ್ತರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸುವ ಯತ್ನ ಮಾಡಿದೆ.

RELATED ARTICLES
- Advertisment -
Google search engine

Most Popular