ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ತಕ್ಷಣವೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ರೂ.೨೫ ರಷ್ಟು ಹೆಚ್ಚಳ ಮಾಡಿದೆ.
ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. ದಿಲ್ಲಿಯಲ್ಲಿ ವಾಣಿಜ್ಯ ಬಳಕೆಯ ೧೯ ಕೆ.ಜಿ. ತೂಕದ ಸಿಲಿಂಡರ್ ದರವು ರೂ. ೧,೭೯೫ಕ್ಕೆ ಏರಿಕೆ ಆಗಿದ್ದು, ಮುಂಬೈನಲ್ಲಿ ರೂ. ೧,೭೪೯ಕ್ಕೆ ಏರಿಕೆಯಾಗಿದೆ.