Sunday, May 25, 2025
Google search engine

Homeರಾಜ್ಯ18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಾಸಿಕ 1 ಸಾವಿರ ಸಹಾಯ ಧನ: ಎಎಪಿ ಸರ್ಕಾರ ಘೋಷಣೆ

18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಾಸಿಕ 1 ಸಾವಿರ ಸಹಾಯ ಧನ: ಎಎಪಿ ಸರ್ಕಾರ ಘೋಷಣೆ

ನವದೆಹಲಿ: ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯಡಿ ೧೮ ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೂ ಮಾಸಿಕ ೧ ಸಾವಿರ ನೀಡುವ ಘೋಷಣೆಯನ್ನು ಎಎಪಿ ಆಡಳಿತದ ದೆಹಲಿ ಸರ್ಕಾರವು ತನ್ನ ೨೦೨೪-೨೫ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದೆ.
ದೆಹಲಿ ವಿಧಾನಸಭೆಯಲ್ಲಿ ತಮ್ಮ ೧೦ನೇ ಬಜೆಟ್ ಭಾಷಣ ಮಾಡಿದ ರಾಜ್ಯ ಸರ್ಕಾರದ ಹಣಕಾಸು ಸಚಿವೆ ಅತಿಶಿ ಅವರು ಈ ಘೋಷಣೆ ಮಾಡಿದ್ದಾರೆ.

ಈ ಯೋಜನೆಗಾಗಿಯೇ ೨,೭೧೪ ಕೋಟಿ ಮೀಸಲಿಡಲಾಗಿದೆ. ಇದು ಮಹಿಳೆಯರ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ಯೋಜನೆಗಳಿಗೆ ೬,೨೧೬ ಕೋಟಿ ಮೀಸಲಿಡಲಾಗಿದೆ. ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಈ ಅನುದಾನ ಬಳಕೆ ಮಾಡಲಾಗುವುದು. ಇದರಿಂದಾಗಿ ರಾಜ್ಯದಲ್ಲಿರುವ ೯.೦೩ ಲಕ್ಷ ಫಲಾನುಭವಿಗಳಿಗೆ ಮಾಸಿಕ ೨ ಸಾವಿರದಿಂದ ೨,೫೦೦ರಷ್ಟು ಆರ್ಥಿಕ ನೆರವುಪಡೆಯುತ್ತಿದ್ದಾರೆ ಎಂದು ಸದನಕ್ಕೆ ಹೇಳಿದರು.

RELATED ARTICLES
- Advertisment -
Google search engine

Most Popular