ಧಾರವಾಡ : ಧಾರವಾಡ ಜಿಲ್ಲೆಯ ಎಲ್ಲಾ 8 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರವು ಘೋಷಣೆ ಮಾಡಿದೆ. ಮತ್ತು ಸರಕಾರದ ನಿರ್ದೇಶನದಂತೆ ಬರಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆ ಅಗದಂತೆ ನಿಯಾಮಾನುಸಾರ ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಧಾರವಾಡ ಜಿಲ್ಲೆಯ ಸಾರ್ವಜನಿಕರು ತಮ್ಮ ಗ್ರಾಮ, ನಗರ, ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆಗಳ ಕಂಡುಬಂದಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ: 0836-2233880 ಗೆ ಕರೆ ಮಾಡಿ ಪರಿಹಾರವನ್ನು ಕಂಡು ಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ