Saturday, May 24, 2025
Google search engine

Homeರಾಜಕೀಯಲೋಕಸಭಾ ಚುನಾವಣೆ: ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ- ಶೋಭಾ ಕರಂದ್ಲಾಜೆ

ಲೋಕಸಭಾ ಚುನಾವಣೆ: ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ- ಶೋಭಾ ಕರಂದ್ಲಾಜೆ

ಸುಬ್ರಹ್ಮಣ್ಯ: ರಾಜಕೀಯ ಎಂದರೆ ಅಸಮಾಧಾನಗಳು ಇರುತ್ತದೆ. ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲಗಳು ಆಗಿಯೇ ಆಗುತ್ತದೆ. ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಕಿದು ಸಿಪಿಸಿಆರ್ ಐ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ನಮ್ಮ ಕೇಂದ್ರದ ಚುನಾವಣಾ ಮಂಡಳಿ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಅದಕ್ಕೆ ಬದ್ಧರಾಗಿದ್ದೇವೆ ಎಂದರು.

ನೀವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ, ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ನಗುತ್ತಾ ಉತ್ತರಿಸಿದರು.

RELATED ARTICLES
- Advertisment -
Google search engine

Most Popular