Tuesday, May 20, 2025
Google search engine

Homeರಾಜ್ಯಕಡಬೂರು:  ಆತ್ಮಹತ್ಯೆಗೆ ಶರಣಾಗಿದ್ದ ಬಾಲಕಿ ಮನೆಗೆ ಸಚಿವರ ಭೇಟಿ, ಪೋಷಕರಿಗೆ ಸಾಂತ್ವಾನ

ಕಡಬೂರು:  ಆತ್ಮಹತ್ಯೆಗೆ ಶರಣಾಗಿದ್ದ ಬಾಲಕಿ ಮನೆಗೆ ಸಚಿವರ ಭೇಟಿ, ಪೋಷಕರಿಗೆ ಸಾಂತ್ವಾನ

ಕಡಬೂರು:  ಇತ್ತೀಚಿಗೆ ಕರದಾಳ ಗ್ರಾಮದಲ್ಲಿರುವ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಾಲಕಿ ಆತ್ಮಹತ್ಯೆ ಗೆ ದುಃಖ ವ್ಯಕ್ತಪಡಿಸಿದ ಸಚಿವರು ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್ ಮಾಡಿಸಲಾಗುವುದು ಎಂದರು.

ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ  ಜೊತೆಗೆ ಇರುವುದಾಗಿ ಭರವಸೆ ನೀಡಿದ ಸಚಿವರು ಕಾಂಗ್ರೆಸ್ ಪಕ್ಷದ ವತಿಯಿಂದ ರೂ 1 ಲಕ್ಷ ಪರಿಹಾರದ ಹಣವನ್ನು ಪೋಷಕರಿಗೆ ನೀಡಿದರು.

ಈ ಸಂದರ್ಭದಲ್ಲಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ ಲ, ತಹಸೀಲ್ದಾರ ಶಾ ವಲಿ ಸೇರಿದಂತೆ ಹಲವರಿದ್ದರು.

RELATED ARTICLES
- Advertisment -
Google search engine

Most Popular