ಬೆಂಗಳೂರು: ಕರ್ನಾಟಕದ ಎಲ್ಲಾ ೨೮ ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲಬಹುದು ಎಂದು ನಂಬುತ್ತಿರುವುದು ಹಾಸ್ಯಾಸ್ಪದವಲ್ಲವೇ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಒಂದು ದಶಕದ ಮೋಸ, ಭ್ರಷ್ಟಾಚಾರ ಮತ್ತು ಸುಳ್ಳು ಭರವಸೆಗಳ ನಂತರ, ಅವರ ಆಡಳಿತದ ಪರಿಣಾಮಗಳನ್ನುಯಾರು ಎದುರಿಸಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಬಿಜೆಪಿಯ ಕೋಮುವಾದಿ ಮತ್ತು ಒಡೆದು ಆಳುವ ತಂತ್ರಗಳನ್ನು ಕನ್ನಡಿಗರು ಮರೆಯುವುದಿಲ್ಲ. ಬಿಜೆಪಿಯವರು ತಮ್ಮ ಸ್ವಹಿತಾಸಕ್ತಿಗಾಗಿ ಜನರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ವ್ಯಾಪಕವಾಗಿ ಬಹಿರಂಗವಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿಯ ಅತಿಯಾದ ಆತ್ಮವಿಶ್ವಾಸಕ್ಕೆ ವ್ಯತಿರಿಕ್ತವಾಗಿ, ಕಾಂಗ್ರೆಸ್ ಪಕ್ಷವು ರಾಜ್ಯಾದ್ಯಂತ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಂಪೂರ್ಣ ಸಜ್ಜಾಗಿದೆ. ಬಿಜೆಪಿಯು ಆಂತರಿಕವಾಗಿ ಅಧಿಕಾರದ ಹೋರಾಟದಿಂದ ಹೆಣಗಾಡುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸಾರ್ವಜನಿಕ ಆಕ್ರೋಶವನ್ನು ಎದುರಿಸಲಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ.