Thursday, July 3, 2025
Google search engine

Homeರಾಜಕೀಯಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಬರಹ ವಿಚಾರವಾಗಿ ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಭಾರತೀಯ ಜನತಾ ಪಕ್ಷದಿಂದ ದೂರು ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಹೊಸದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ವಿಚಾರವಾಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ `ಚೋರ್ ಗುರು ಚಾಂಡಲ್ ಶಿಷ್ಯ’ ಎಂದು ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು. ಈ ಸಂಬಂಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಾಗಿದೆ.

RELATED ARTICLES
- Advertisment -
Google search engine

Most Popular