ಬೆಂಗಳೂರು : ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿ ಕಾರಣ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದರು. ಈ ಸಂಬಂಧ ಡಿಎಂಕೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಚುನಾವಣಾಧಿಕಾರಿಗಳ ದೂರಿನ ಮೇರೆಗೆ ಬೆಂಗಳೂರಿನ ಕಾಟನ್ಪೇಟೆ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಲ್ಲದೆ, ಕಳೆದ ಭಾನುವಾರ ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸರು ಕೇಸ್ ದಾಖಲಿಸಿದ್ದರು.