ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಶಾಸಕ ತನ್ವೀರ್ ಸೇಠ್ ಸೇರಿ ಐವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶಾಸಕ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ ಭಂಡಾರಿ, ವಸಂತ ಕುಮಾರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್. ಹನುಮಂತಯ್ಯ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷಾದ್ ರನ್ನು ನೇಮಿಸಲಾಗಿದೆ.