Sunday, June 8, 2025
Google search engine

Homeರಾಜ್ಯಸುದ್ದಿಜಾಲಶಿವಮೊಗ್ಗದಲ್ಲಿ ಗೀತಾ ಶಿವರಾಜಕುಮಾರ್ ಪ್ರಚಾರ ಸಭೆ

ಶಿವಮೊಗ್ಗದಲ್ಲಿ ಗೀತಾ ಶಿವರಾಜಕುಮಾರ್ ಪ್ರಚಾರ ಸಭೆ

ಶಿವಮೊಗ್ಗ: ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದೇ, ಧೈರ್ಯದಿಂದ ಗೀತಾ ಅಕ್ಕನಿಗೆ ಮತ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವದಿಸಬೇಕಾಗಿ ಕೇಳಿಕೊಳ್ಳುತ್ತಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್ ಬಂಗಾರಪ್ಪ ಅವರ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು? ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ರೈತರಿಗೆ ಬೆಂಬಲ ಬೆಲೆ ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ರಾಜ್ಯ ಮಟ್ಟದಲ್ಲಿ ಸಚಿವ ಮಧು ಬಂಗಾರಪ್ಪ ರೈತರ ಕಷ್ಟಗಳಿಗೆ ನೆರವಾದರೆ, ಕೇಂದ್ರದ ಹಂತದಲ್ಲಿ ರೈತರ ಕಷ್ಟಗಳಿಗೆ ಸ್ಪಂದಿಸಲು ನಾನು ಶ್ರಮಿಸುತ್ತೇನೆ. ಅದೇ ಕಾರಣಕ್ಕೆ ನನಗೆ ಮತ ನೀಡಿ ಎಂದು ಕೋರಿದರು.

ನಟ ಶಿವರಾಜಕುಮಾರ್ ಮಾತನಾಡಿ, ಜನರು ಬದಲಾವಣೆ ಬಯಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ, ಈ ಯೋಜನೆಗಳಿಂದ ಬಡವರಿಗೆ ಸಹಾಯ ಆಗಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳಿಗೆ ಬೆಲೆ ಸಿಗಲಿದೆ. ಈ ನಿಟ್ಟಿನಲ್ಲಿ ಯೋಜನೆಗಳು ಜನಸಾಮಾನ್ಯರಿಗೆ ನೆರವಾಗಿವೆಯೆಂದು ನಾನು ಬಯಸುತ್ತೇನೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular