Thursday, June 19, 2025
Google search engine

Homeಅಪರಾಧಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ: 1.20 ಕೋಟಿ ನಗದು, 800 ಗ್ರಾಂ ಚಿನ್ನಾಭರಣ...

ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ: 1.20 ಕೋಟಿ ನಗದು, 800 ಗ್ರಾಂ ಚಿನ್ನಾಭರಣ ವಶಕ್ಕೆ

ಬೆಂಗಳೂರು ಗ್ರಾಮಾಂತರ: ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ಇಂದು(ಮಾ.31) ದಾಳಿ ನಡೆಸಿದ್ದು, 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್​ ಎಂಬುವವರ ಅಳಿಯ ಆಗಿರುವ ಲೋಕೇಶ್, ಕೆಲದಿನಗಳ ಹಿಂದೆ ಗಡಿಭಾಗದ ಚೆಕ್ ​ಪೋಸ್ಟ್ ​ನಲ್ಲಿ 10 ಲಕ್ಷ ಹಣದ ಜೊತೆ ಸಿಕ್ಕಿಬಿದ್ದಿದ್ದರು. ಈ ಹಿನ್ನಲೆ ಅನುಮಾನದಿಂದ ಐಟಿ ಇಲಾಖೆ ಡಿಡಿ ವಿಷ್ಣುಪ್ರಸಾದ್ ನೇತೃತ್ವದಲ್ಲಿ 6 ಅಧಿಕಾರಿಗಳು ತಮಿಳುನಾಡಿನ ಹೊಸೂರಿನಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ ದಾಖಲೆ ಇಲ್ಲದೆ ಸಂಗ್ರಹಿಸಿದ್ದ ಚಿನ್ನಾಭರಣ, ನಗದು ಪತ್ತೆಯಾಗಿದೆ.

RELATED ARTICLES
- Advertisment -
Google search engine

Most Popular