ರಾಮನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದಂತೆ ೨೩-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲ್ಲಿ ಇಂದು (ಏ. ೧ ರಂದು) ೫ ನಾಮಪತ್ರ ಸ್ವೀಕರಿಸಲಾಗಿದೆ. ೨೩-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಇಂದು ಯಂಗ್‌ಸ್ಟಾರ್ ಎಂಪವರ್‍ಮೆಂಟ್ ಪಕ್ಷದ ಅಭ್ಯರ್ಥಿ ಮೊಹಮ್ಮದ್ ದಸ್ತಗೀರ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಅಭಿಷೇಕ್ ಕೆ., ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ ಅಭ್ಯರ್ಥಿ ಕುಮಾರ್ ಎಲ್., ಸ್ವತಂತ್ರ ಅಭ್ಯರ್ಥಿ ಜೆ.ಟಿ. ಪ್ರಕಾಶ್ ಹಾಗೂ ಅಖಿಲ ಭಾರತ್ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಎಚ್. ರಾಜಣ್ಣ ಅವರು ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.