Sunday, May 25, 2025
Google search engine

Homeರಾಜ್ಯಸುದ್ದಿಜಾಲಶಿವರಾಜ್ ಕುಮಾರ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಶಿವರಾಜ್ ಕುಮಾರ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಕಳೆದ ಹಲವು ದಿನಗಳಿಂದ ಲೋಕಾ ಸಭಾ ಚುನಾವಣೆ ಪ್ರಚಾರದಲ್ಲಿ ಬಿಝಿ ಇದ್ದ ಶಿವಣ್ಣರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆಯ ವೇಳೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗುವ ಸೂಚನೆ ಇದೆ ಎಂದು ವರದಿಗಳು ತಿಳಿಸಿವೆ.

ಕಳೆದ ಹಲವು ದಿನಗಳಿಂದ ಶಿವರಾಜ್ ಕುಮಾರ್ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನಿರತರಾಗಿದ್ದಾರೆ. ಗೀತಾ ಶಿವರಾಜ್ ಕುಮಾರ್‌ಗೆ ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗದಲ್ಲಿ ಟಿಕೆಟ್ ದೊರಕಿತ್ತು. ಶಿವರಾಜ್ ಕುಮಾರ್ ಅವರು ಹಲವು ದಿನಗಳಿಂದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಬೇಸಿಗೆ ಬಿಸಿಲಿನ ತಾಪ, ಸುತ್ತಾಟದಿಂದ ಶಿವಣ್ಣ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ಹೇಳಲಾಗಿದೆ.

RELATED ARTICLES
- Advertisment -
Google search engine

Most Popular