ಮಂಗಳೂರು(ದಕ್ಷಿಣ ಕನ್ನಡ): ಈ ಸಲದ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಸೌಜನ್ಯಾ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದೆ. ಹೋರಾಟಗಾರರು ಈ ಬಾರಿ ನೋಟಾ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ತಿಳಿಸಿದ್ದಾರೆ.
ಅವರು ಇಂದು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಅವರು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ ಕೊಲೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದ ಎಲ್ಲಾ ಹೆಣ್ಣು ಮಕ್ಕಳ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗನೀಸುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿರುವುದಾಗಿ ಹೇಳಿದರು.
ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.