Saturday, May 24, 2025
Google search engine

Homeಅಪರಾಧಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವು

ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವು

ಹನೂರು (ಚಾಮರಾಜನಗರ): ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಶುಕ್ರವಾರ ಜರುಗಿದೆ.

ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ಮೀನಾ (33), ಪವಿತ್ರ (13) ಕೀರ್ತಿ(11) ಮೃತರು.

ಘಟನೆ ವಿವರ: ಪುದೂರು ನಿವಾಸಿಗಳಾದ ಮೀನಾ ಪುತ್ರಿಯರಾದ ಪವಿತ್ರ, ಕೀರ್ತಿ, ಮಗ ಸುರೇಂದ್ರ ಶುಕ್ರವಾರ ಬೆಳಗ್ಗೆ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ಒಗೆಯಲು ಹೋಗಿದ್ದಾರೆ. ಬಟ್ಟೆ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋಗಿ ತಾಯಿ ಮೀನಾ ಆಕಸ್ಮಿಕವಾಗಿ ಕಾಲು ಜಾರಿಬಿದಿದ್ದಾರೆ. ತಕ್ಷಣ ಇಬ್ಬರು ಹೆಣ್ಣು ಮಕ್ಕಳಾದ ಕೀರ್ತಿ ಹಾಗೂ ಪವಿತ್ರ ತಾಯಿಯನ್ನು ರಕ್ಷಣೆ ಮಾಡಲು ಹೋಗಿ ಇವರು ಸಹ ಮುಳುಗಿದ್ದಾರೆ.

ಸ್ಥಳದಲ್ಲಿಯೇ ಇದ್ದ ಮಗ ಸುರೇಂದ್ರ ತಂದೆಯವರಿಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರು ನೀರು ಪಾಲಾಗಿದ್ದರು. ನಂತರ ಗ್ರಾಮಸ್ಥರ ಸಹಾಯದಿಂದ ಮೂವರನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳುಹಿಸಲಾಗಿದೆ.

ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular