Friday, January 16, 2026
Google search engine

Homeರಾಜ್ಯಸುದ್ದಿಜಾಲತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ

ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ

ಮಡಿಕೇರಿ : ವಿಶ್ವ ಆರೋಗ್ಯ ದಿನದ ನಿಮಿತ್ತ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕೊಡಗು ವೈದ್ಯಕೀಯ ವಿಜ್ಞಾನಗಳ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ನಗರದ ರಾಜಸೀಟ್ ಎದುರು ನಡೆಸಲಾಯಿತು.

ಈ ಬೀದಿ ನಾಟಕದಲ್ಲಿ ಹೃದಯಾಘಾತ ಮತ್ತು ಧೂಮಪಾನ ಮತ್ತು ಧೂಮಪಾನದ ತೊಂದರೆಗಳು ಮತ್ತು ಬಳಲುತ್ತಿರುವ ಬಗ್ಗೆ ತಿಳಿಸಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ಪ್ರಾಂಶುಪಾಲ ಡಾ.ನರಸಿಂಹ ರೈ, ವೈದ್ಯಕೀಯ ಅಧೀಕ್ಷಕ ಡಾ.ಸೋಮಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ನಂಜುಂಡಯ್ಯ, ಮುಖ್ಯ ಆಡಳಿತಾಧಿಕಾರಿ ರೋಹಿಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಥಮ ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಂದ ಬೀದಿನಾಟಕ ನಡೆಸಿಕೊಟ್ಟಿದ್ದು, ಕಿವಿ, ಮೂಗು ಗಂಟಲು ವಿಭಾಗದ ಮುಖ್ಯಸ್ಥ ಡಾ.ಶ್ವೇತ ಸಂಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.

RELATED ARTICLES
- Advertisment -
Google search engine

Most Popular