ಬೆಂಗಳೂರು: ಇತ್ತೀಚಿಗಷ್ಟೆ ನಿಧನರಾದ ನಟ, ರಾಜಕಾರಣಿ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರ ಪತ್ನಿ ವಾಣಿ ಕೆ.ಶಿವರಾಮ್ ಇಂದು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಪತಿ ಗುರುತಿಸಿಕೊಂಡಿದ್ದ ಬಿಜೆಪಿ ಪಕ್ಷದ ಬಗ್ಗೆ ಅಸಮಾಧಾನಗೊಂಡಿರುವ ವಾಣಿ ಕೆ.ಶಿವರಾಮ್ ಅವರು ಇಂದು ಅಧೀಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸೋಮವಾರ ಸಂಜೆ ೪ ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರ ಪತ್ನಿ ವಾಣಿ ಕೆ.ಶಿವರಾಮ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಇತ್ತೀಚೆಗೆ ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರು ಅನಾರೋಗ್ಯದಿಂದ ನಿಧನರಾದರು. ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದ ಅವರ ಹಾದಿಯಲ್ಲೇ ನಡೆಯಲು ಪತ್ನಿ ವಾಣಿ ಕೆ.ಶಿವರಾಮ್ ಮುಂದಾಗಿದ್ದಾರೆ. ಪತಿ ನಂತರ ಪತ್ನಿ ವಾಣಿ ಶಿವರಾಮ್ ಜನಸೇವೆ ಮಾಡುವ ಬಗ್ಗೆ ಅಭಿಲಾಷೆ ವ್ಯಕ್ತಪಡಿಸಿದ್ದರು.