Wednesday, June 18, 2025
Google search engine

Homeರಾಜ್ಯಸುದ್ದಿಜಾಲಯುವಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ ತಹಸೀಲ್ದಾರ್

ಯುವಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ ತಹಸೀಲ್ದಾರ್

ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ : ಕ್ರಿಕೆಟ್ ಆಟ ಆಡುತ್ತಿದ್ದ ಯುವಕರಿಗೆ ತಹಶೀಲ್ದಾರ್ ಸುರೇಂದ್ರ ಮೂರ್ತಿ ಅವರು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಪಿರಿಯಾಪಟ್ಟಣ ತಾಲೂಕಿನ ಬೆಕ್ಕರೆ ಗ್ರಾಮದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಮ ದೇವತೆ ಶ್ರೀ ಬಾಲಚಂದ್ರ ಬಸವೇಶ್ವರ ಸ್ವಾಮಿ ಆಶೀರ್ವಾದದೊಂದಿಗೆ ಗ್ರಾಮಸ್ಥರ ಸಹಕಾರದೊಂದಿಗೆ ನಡೆಯುತ್ತಿದ್ದ ಬಿಪಿಎಲ್ ಸೀಸನ್ -೧ ಕ್ರಿಕೆಟ್ ಟೂರ್ನಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಅವರು ಮಾತನಾಡಿ ಯುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ದೇಶ ಕಟ್ಟುವ ಕಾರ್ಯ ಮಾಡಬೇಕು.

ಯುವಕರು ಪ್ರಜಾಪ್ರಭುತ್ವದಲ್ಲಿ ಮತದಾನದ ಮೌಲ್ಯವನ್ನು ಅರಿತುಕೊಳ್ಳಬೇಕು, ಒಂದೊಂದು ಮತಕ್ಕೂ ಬೆಲೆಯಿದೆ, ಒಂದು ಸದೃಢ ದೇಶ ಕಟ್ಟುವ ನಿಟ್ಟಿನಲ್ಲಿ ಮತದಾನ ಪ್ರಮುಖ ಪಾತ್ರ ವಹಿಸುವುದರಿಂದ ಯಾವುದೇ ಆಮಿಷಕ್ಕೆ ಒಳಗಾಗದೇ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಯುವಕರು ತಪ್ಪದೇ ಮತದಾನ ಮಾಡಿ ಜೊತೆಗೆ ತಮ್ಮ ಕುಟುಂಬದ ಹಾಗೂ ಸುತ್ತಮುತ್ತಲಿನ ಜನರನ್ನು ಕೂಡ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿ ಕ್ರೀಡಾಕೂಟಗಳಲ್ಲಿ ಭಾಗವಹಿಸುವವರು ಕ್ರೀಡಾ ಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಲು ಕರೆ ನೀಡಿದರು.

ಭುವನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ದೇವರಾಜೇಗೌಡ ಅವರು ಮಾತನಾಡಿ ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕಡ್ಡಾಯವಾಗಿ ಮತದಾನ ಮಾಡುವ ಉದ್ದೇಶದಿಂದ ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕು ಸ್ವೀಪ್ ಸಮಿತಿ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭ ಗ್ರಾಮ ಲೆಕ್ಕಿಗರಾದ ನವೀನ್ ರಾವ್, ದೀಪಕ್, ಭುವನಹಳ್ಳಿ ಗ್ರಾಮ ಪಂಚಾಯತಿ ಸಿಬ್ಬಂದಿ ಸತ್ಯನಾರಾಯಣ್, ರಾಜು ಮತ್ತು ಬೆಕ್ಕರೆ ಗ್ರಾಮಸ್ಥರು ಇದ್ದರು.

RELATED ARTICLES
- Advertisment -
Google search engine

Most Popular