Sunday, May 25, 2025
Google search engine

Homeಅಪರಾಧಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ, ೧೫ ಮಂದಿ ವಶಕ್ಕೆ

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ, ೧೫ ಮಂದಿ ವಶಕ್ಕೆ

ಗೋವಾ: ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಕನಿಷ್ಠ ೧೫ ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತಪಟ್ಟ ಅಪ್ರಾಪ್ತ ಬಾಲಕಿಯನ್ನು ಮುಂಜಾನೆ ೩ ಗಂಟೆಗೆ ಘಟನೆ ಸಮಯದಲ್ಲಿ ಆಸ್ಪತ್ರೆಗೆ ಕರೆತರಲಾಗಿದ್ದು ಈ ಬಗ್ಗೆ ಆಸ್ಪತ್ರೆಯು ಪೊಲೀಸರಿಗೆ ಮಾಹಿತಿ ನೀಡಿದರು. ಸಂತ್ರಸ್ತೆಯ ಪೋಷಕರು ಪಶ್ಚಿಮ ಬಂಗಾಳದಿಂದ ವಲಸೆ ಬಂದ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ದಕ್ಷಿಣ ಗೋವಾ ಎಸ್‌ಪಿ ಸುನೀತಾ ಸಾವಂತ್, ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಚ್ಚಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಘಟನೆಯ ಸಮಯದಲ್ಲಿ ನಿರ್ಮಾಣ ಹಂತದ ಕಟ್ಟಡದ ಸುತ್ತಮುತ್ತ ಕೆಲಸ ಮಾಡುತ್ತಿದ್ದ ೧೫ರಿಂದ ೨೦ ಕಾರ್ಮಿಕರನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ೩೭೬ (ಅತ್ಯಾಚಾರ), ೩೦೨ (ಕೊಲೆ), ಪೋಕ್ಸೋ ಕಾಯ್ದೆ ಮತ್ತು ಗೋವಾ ಮಕ್ಕಳ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular