ಮಂಡ್ಯ: ನಾಳೆ ಮಂಡ್ಯದ ವಿವಿ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದ್ದು, ರಾಹುಲ್ ಗಾಂಧಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಮಂಡ್ಯದ ಬೃಹತ್ ವೇದಿಕೆ ತಯಾರಿ ಮಾಡಲಾಗಿದ್ದು, ಜರ್ಮನ್ ಟೆಂಟ್ ಮೂಲಕ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅವರು ಸಿದ್ದತೆ ಪರಿಶೀಲನೆ ನಡೆಸಿದರು.
ನಾಳೆ ಮಧ್ಯಾಹ್ನ 1.30 ಕ್ಕೆ ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಹೆಲಿಪ್ಯಾಡ್ ಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಬಳಿಕ ಕಾಂಗ್ರೆಸ್ ಬೃಹತ್ ಸಮಾವೇಶದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನರನ್ನ ಸೇರಿಸಿ ಶಕ್ತಿ ಪ್ರದರ್ಶನಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ರಾಹುಲ್ ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಸಾಥ್ ನೀಡಲಿದ್ದಾರೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಮಾಹಿತಿ ನೀಡಿದರು.