ಮಂಗಳೂರು(ದಕ್ಷಿಣ ಕನ್ನಡ): ಕೇಂದ್ರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ ಮರು ಆರಂಭಿಸಲಾಗುವುದು. ಇದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ ಗ್ಯಾರಂಟಿಗಳಲ್ಲಿ ಸೇರಿದೆ ಎಂದು ಅನಿವಾಸಿ ಭಾರತೀಯ ಫೋರಂನ ಉಪಾಧ್ಯಕ್ಷೆ ಹಾಗೂ ಕೆಪಿಸಿಸಿ ಅನಿವಾಸಿ ಭಾರತೀಯ ವಿಭಾಗದ ಅಧ್ಯಕ್ಷೆ ಡಾ. ಆರತಿ ಕೃಷ್ಣ ಹೇಳಿದ್ದಾರೆ.
ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಗಲ್ಫ್ ರಾಷ್ಟ್ರ ಸೇರಿದಂತೆ ವಿದೇಶದಲ್ಲಿರುವ ಅನಿವಾಸಿ ಕನ್ನಡಿಗರಿಗೆ ನೆರವು ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ನಿಟ್ಟಿನಲ್ಲಿ ಕೆಲಸ ಕಾರ್ಯ ನಡೆಯುತ್ತಿದೆ ಎಂದರು.